ಅಹಮದಾಬಾದ್: ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಎಟಿಎಸ್ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ ಇರಾನಿನ ದೋಣಿಯಿಂದ 526 ಕೆಜಿಗೂ ಹೆಚ್ಚು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಹೆರಾಯಿನ್ ಮತ್ತು ಮೆಥಾಂಫೆಟಮೈನ್‌ನ ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯ 3,000 ಕೋಟಿಗೂ ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ.