ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ಲಕ್ನೋದಲ್ಲಿ ನಡೆಯಲಿದೆ. ಏಕದಿನ ಸರಣಿ ಗೆದ್ದ ಭಾರತ, ಟಿ20 ಸರಣಿಯಲ್ಲೂ ಪ್ರಾಬಲ್ಯ ಸಾಧಿಸಲು ಸಜ್ಜಾಗಿದೆ. ಆದರೆ, ಲಕ್ನೋದಲ್ಲಿ ನಿರಂತರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 10ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ.