ರಿಲಯನ್ಸ್ ಕಂಪನಿಯ ತ್ರೈಮಾಸಿಕ ಫಲಿತಾಂಶದ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ರಿಲಯನ್ಸ್ ಷೇರುಗಳು ಭಾರಿ ಏರಿಕೆ ಕಂಡಿವೆ. ಇದರಿಂದಾಗಿ ಮುಕೇಶ್ ಅಂಬಾನಿ ಅವರ ಆಸ್ತಿ ಕೇವಲ ಒಂದೇ ದಿನದಲ್ಲಿ 6 ಬಿಲಿಯನ್ ಡಾಲರ್‌ಗಿಂತಲೂ ಹೆಚ್ಚು ಏರಿಕೆಯಾಗಿದೆ. ಈ ಮೂಲಕ ಅವರು ಫೋರ್ಬ್ಸ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 23ನೇ ಸ್ಥಾನಕ್ಕೆ ಜಿಗಿದಿದ್ದಾರೆ.