ಮಹಾದೇವ್ ಆನ್‌ಲೈನ್ ಬುಕ್ ಬೆಟ್ಟಿಂಗ್ ಆ್ಯಪ್ ಕಿಂಗ್‌ಪಿನ್ ಸೌರಭ್ ಚಂದ್ರಾಕರ್‌ನನ್ನು ಒಮನ್‌ನಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ. ಕೋಟ್ಯಂತರ ರೂಪಾಯಿ ಅಕ್ರಮ ಬೆಟ್ಟಿಂಗ್ ಮತ್ತು ಹವಾಲಾ ಜಾಲ ನಡೆಸುತ್ತಿದ್ದ ಚಂದ್ರಾಕರ್‌ನನ್ನು CBI ವಶಕ್ಕೆ ಪಡೆದಿದೆ. ವಿದೇಶದಿಂದ ನಿಯಂತ್ರಿಸಲ್ಪಡುತ್ತಿದ್ದ ಈ ಜಾಲ, ಅಧಿಕಾರಿಗಳಿಗೆ ಲಂಚ ನೀಡಿ ಅಕ್ರಮಗಳನ್ನು ನಡೆಸಿತ್ತು.