ಮೈಸೂರು: ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮನುಗನಹಳ್ಳಿ ನಿಸರ್ಗ ಪ್ಯಾರಡೈಸ್ ಬಡಾವಣೆಯ ನಿವಾಸಿ ಶಿವಕುಮಾರ.ಎನ್ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಿಳಿಕೆರೆ ಪೊಲೀಸರು ಬಂಧಿಸಿ, ₹ 9 ಲಕ್ಷ ಮೌಲ್ಯದ ಚಿನ್ನದ ಒಡವೆ ಹಾಗೂ ₹ 4.50 ಲಕ್ಷ ಮೌಲ್ಯದ ಕಾರು ವಶಕ್ಕೆ ಪಡೆದಿದ್ದಾರೆ.