ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನಾಳೆಯೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ನಾಳೆ ಮಳೆ ಚುರುಕಾಗುವ ಸಾಧ್ಯತೆ ಇದೆ.