ಹಬ್ಬ ಮತ್ತು ಮದುವೆ ಸೀಸನ್​ಗಳಲ್ಲಿ ಚಿನ್ನದ ಖರೀದಿಯಲ್ಲಿ ಹೆಚ್ಚಳವಾಗಿದ್ದರೂ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಾರಾಟ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಷನ್ ​​(ಐಬಿಜೆಎ) ಅಂದಾಜಿಸಿದೆ. ಅಕ್ಟೋಬರ್‌ನಲ್ಲಿ ಚಿನ್ನದ ಮಾರಾಟ ಕಳೆದ ವರ್ಷಕ್ಕಿಂತ ಸುಮಾರು 11 ಪ್ರತಿಶತ ಕಡಿಮೆಯಾಗಬಹುದು ಎಂದು ಹೇಳಲಾಗಿದೆ.