ಮಾಜಿ ಆಟಗಾರ ಇರ್ಫಾನ್ ಪಠಾಣ್ ಅವರು ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ದಿಗ್ಗಜರನ್ನು ಹಿಂದಿಕ್ಕಿ ಸಾರ್ವಕಾಲಿಕ ಶ್ರೇಷ್ಠ ಟಿ20 ಕ್ರಿಕೆಟಿಗನನ್ನು ಆಯ್ಕೆ ಮಾಡಿದ್ದಾರೆ. ತಮ್ಮ ಬಹುಮುಖ ಸಾಮರ್ಥ್ಯದಿಂದ ಗಮನ ಸೆಳೆದಿರುವ ವೆಸ್ಟ್ ಇಂಡೀಸ್‌ನ ಸ್ಪಿನ್ ಆಲ್‌ರೌಂಡರ್ ಒಬ್ಬರನ್ನು ಅವರು ಈ ಸ್ಥಾನಕ್ಕೆ ಹೆಸರಿಸಿದ್ದಾರೆ.