ಬೆಂಗಳೂರು: ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ಇನ್ನೋವೇಷನ್ ಅಂಡ್ ಟೆಕ್ನಾಲಜಿ ಸೊಸೈಟಿ (ಕೆಐಟಿಎಸ್), ಜಾಗತಿಕ ವಾಯ್ಸ್ ಎಐ ಸಂಸ್ಥೆಯಾದ ಎಲೆವನ್‌ಲ್ಯಾಬ್ಸ್ ಇಂಕ್. ಜೊತೆ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಮಾಡಿದೆ.