ಭಾರತ ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅಪರೂಪದ ವಿದ್ಯಮಾನವೊಂದಕ್ಕೆ ಮುಂಬರುವ ನ್ಯೂಝಿಲೆಂಡ್ ಟೆಸ್ಟ್ ಸರಣಿ ಸಾಕ್ಷಿಯಾಗುತ್ತಿದೆ! ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಹಾಗೂ ನಾಯಕ ಶುಭ್​ಮನ್ ಗಿಲ್, ವಿದೇಶಿ ಮಣ್ಣಿನಲ್ಲಿ ತಮಗಿರುವ ಬ್ಯಾಟಿಂಗ್ ಸವಾಲನ್ನು ಮೆಟ್ಟಿನಿಲ್ಲಲು ವಿಭಿನ್ನ ಹಾಗೂ ಐತಿಹಾಸಿಕ ಹೆಜ್ಜೆಯಿಟ್ಟಿದ್ದಾರೆ.