ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಮತ್ತೆ ಮಳೆ ಸುರಿದಿದೆ. ಗುಡುಗು-ಸಿಡಿಲು ಸಹಿತ ಮಳೆಯಾಗಿದ್ದು, ಚಳಿಯ ವಾತಾವರಣ ಆವರಿಸಿದೆ. ನಿನ್ನೆ ಬೆಳಗ್ಗೆ 8 ಗಂಟೆ ವರೆಗೆ ಮಳೆ ಸುರಿದಿತ್ತು. ನಂತರ ಬಿಸಿಲಿನ ವಾತಾವರಣ ಇತ್ತು. ಹಗಲಿನಲ್ಲಿ ಬಿಡುವು ನೀಡಿದ್ದ ಮಳೆ ಇಂದು ಮುಂಜಾನೆಯಿಂದ ಸುರಿದಿದೆ.