'ರಣಬಾಲಿ' ಸಿನಿಮಾ ಪ್ರಚಾರದ ವೇಳೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ತಮ್ಮ ದಾಂಪತ್ಯ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಮದುವೆ ಬಳಿಕ ಎಲ್ಲರೂ ವಿಜಯ್‌ರನ್ನು ನೋಡಿಕೊಳ್ಳಲು ಹೇಳಿದ್ದಕ್ಕೆ, ನನ್ನನ್ನು ಯಾರು ನೋಡಿಕೊಳ್ಳುತ್ತಾರೆ ಎಂದು ರಶ್ಮಿಕಾ ಕಣ್ಣೀರು ಹಾಕಿದ್ದಾರೆ. ಅಲ್ಲದೆ, ನಟನೆಯ ಟೀಕೆಗಳ ಬಗ್ಗೆಯೂ ಅವರು ಪ್ರತಿಕ್ರಿಯಿಸಿದ್ದಾರೆ.