ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲೇ ಗೆದ್ದು ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 19.1 ಓವರ್​ಗಳಲ್ಲಿ 172 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 14.4 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.