ನವದೆಹಲಿ: ದೇಶಾದ್ಯಂತ ದೀಪಾವಳಿ (Diwali) ಹಬ್ಬದ ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ `ವೋಕಲ್ ಫಾರ್ ಲೋಕಲ್’ (Vocal For Local) ಅಭಿಯಾನವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ದೇಶದ ಜನರಿಗೆ ಕರೆ ನೀಡಿದ್ದಾರೆ.