ನವದೆಹಲಿ: ಪಾಕಿಸ್ತಾನಕ್ಕೆ (Pakistan) ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ, ನಿವೃತ್ತ ಸೇನಾ ಯೋಧ (Ex Army Jawan) ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಕೇಂದ್ರೀಯ ಸಂಸ್ಥೆಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.