ಧನ್ವೀರ್ ಗೌಡ ವಿರುದ್ಧ ಬಸವೇಶ್ವರ ನಗರ, ಆರ್.ಆರ್ ನಗರ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಜೀವ ಬೆದರಿಕೆ ಹಾಕಿರುವ ಆರೋಪಗಳ ಹಿನ್ನೆಲೆಯಲ್ಲಿ ದೂರುಗಳು ದಾಖಲಾಗಿದ್ದು, ಪೊಲೀಸರು ಪ್ರಕರಣಗಳ ವಿಚಾರಣೆ ಮುಂದುವರಿಸಿದ್ದಾರೆ.