– ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಏಕರೂಪದ ದರ ಜಾರಿಗೊಳಿಸುವ ಬಗ್ಗೆಯೂ ಚಿಂತನೆ ಬೆಂಗಳೂರು: ಖಾಸಗಿ ಆಸ್ಪತ್ರೆಗಳ (Private Hospital) ಚಿಕಿತ್ಸಾ ವೆಚ್ಚದಲ್ಲಿ ಪಾರದರ್ಶಕತೆ ತರಲು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆಯಿಟ್ಟಿದೆ. ಚಿಕಿತ್ಸಾ ದರ ಪಟ್ಟಿ ಪ್ರಕಟಿಸುವುದು ಕಡ್ಡಾಯವಾಗಿದ್ದು, ಏಕರೂಪದ ಚಿಕಿತ್ಸಾ ದರ ನಿಗದಿಪಡಿಸುವ ಬಗ್ಗೆಯೂ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.