ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( KSRTC) ಸಿಹಿ ಸುದ್ದಿ ನೀಡಿದೆ. ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನವೆಂಬರ್ 6ರಿಂದ 8ರವರೆಗೆ ಒಟ್ಟು 2,600 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ನಿರ್ಧರಿಸಿದೆ.