ಬೆಂಗಳೂರು: ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಬೇಸಿಗೆ ಹಂಗಾಮಿನ ಭತ್ತದ ಬೆಳೆಗೆ ನೀರು ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ಸಂಬಂಧ ಭದ್ರಾ ಜಲಾಶಯದಿಂದ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.