ನವದೆಹಲಿ: ಭಾರತದ ಚುನಾವಣಾ ಆಯೋಗದ ಇತಿಹಾಸದಲ್ಲಿ ಮಹಿಳೆಯೊಬ್ಬರು ಮುಖ್ಯ ಚುನಾವಣಾ ಆಯುಕ್ತೆಯಾಗಿ ಅಧಿಕಾರ ವಹಿಸಿಕೊಂಡಿದ್ದು ಒಂದೇ ಬಾರಿ. ಅವರೇ ವಿ.ಎಸ್. ರಾಮಾದೇವಿ. 1990ರ ನವೆಂಬರ್ 26ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತೆಯಾಗಿ ಅಧಿಕಾರ ಸ್ವೀಕರಿಸಿದ ಅವರು, ಡಿಸೆಂಬರ್ 11ರವರೆಗೆ ಅಂದರೆ ಕೇವಲ 16 ದಿನಗಳ ಕಾಲ ಈ ಹುದ್ದೆಯಲ್ಲಿದ್ದರು.