ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ರಾಮಾಯಣ ಸಿನಿಮಾ ಅನೌನ್ಸ್‌ ಆದಾಗಿನಿಂದ ಒಂದಿಲ್ಲೊಂದು ವಿಚಾರಕ್ಕೆ ಸದ್ದು ಮಾಡುತ್ತಲೇ ಇದೆ. ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಮತ್ತು ಬಾಲಿವುಡ್ ನಟ ರಣಬೀರ್ ಕಪೂರ್ ನಟಿಸುತ್ತಿರುವ ಈ ಪೌರಾಣಿಕ ಚಿತ್ರದ ಬಗ್ಗೆ ಭಾರತದಲ್ಲಿ ಮಾತ್ರವಲ್ಲ, ನೆರೆಯ ಪಾಕಿಸ್ತಾನದಲ್ಲೂ ಭಾರೀ ಕ್ರೇಜ್ ಸೃಷ್ಟಿಯಾಗಿದೆ.