ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಗಿದ್ದರೂ ಇಂದಿನ ಸ್ಯಾಂಡಲ್‌ವುಡ್‌ ನೈಟ್ಸ್‌ ರದ್ದಾಗುವುದಿಲ್ಲ ಎಂದು ಚಂದನ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಸಂಜೆ 5 ಗಂಟೆಗೆ ತಾವೇ ಕಾರ್ಯಕ್ರಮ ಆರಂಭಿಸುತ್ತಿರುವುದಾಗಿ ತಿಳಿಸಿರುವ ಅವರು, ಉತ್ತೇನಹಳ್ಳಿ ಮೈದಾನಕ್ಕೆ ಬರುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.