ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಆದೇಶಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್‌ ಫೋನ್‌ ಮತ್ತು ಪೆನ್‌ಡ್ರೈವ್‌ ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಮಹತ್ವದ ಬೆಳವಣೆಗೆ ನಡೆದಿದೆ.