ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೊಸ ಗೃಹೋಪಯೋಗಿ ಉಪಕರಣಗಳನ್ನು ಖರೀದಿಸಲು ಯೋಜಿಸುತ್ತಿರುವವರಿಗೆ ಶಾಕ್ ಕಾದಿದೆ. ಪ್ರಮುಖ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ಉಪಕರಣ ಕಂಪನಿಗಳು ಅಕ್ಟೋಬರ್ 1 ರಿಂದ ಎಸಿ, ಟಿವಿ, ರೆಫ್ರಿಜರೇಟರ್ ಮತ್ತು ವಾಷಿಂಗ್ ಮೆಷಿನ್‌ಗಳ ಬೆಲೆಯನ್ನು ಹೆಚ್ಚಿಸಲು ಸಿದ್ಧತೆ ನಡೆಸುತ್ತಿವೆ.