ರೈಲ್ವೆ ಇಲಾಖೆಯಿಂದ ಮುಂಬೈ ಹಾಗೂ ಬೆಂಗಳೂರಿನ ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್ ಕೊಡಲಾಗಿದೆ. ದೀಪಾವಳಿ, ಛತ್ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಮುಂಬೈ ಹಾಗೂ ಬೆಂಗಳೂರು ನಡುವೆ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆಯು ನಿರ್ಧರಿಸಿದೆ.