ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಕೇದಾರ್‌ ಜಾಧವ್ ಪುಣೆಯಲ್ಲಿ ನಡೆದ ಆರ್‌ಎಸ್‌ಎಸ್ ವಿಜಯದಶಮಿ ಪಥ ಸಂಚಲನದಲ್ಲಿ ಗಣವೇಷ ತೊಟ್ಟು ಭಾಗವಹಿಸಿದ್ದಾರೆ. ಇತ್ತೀಚೆಗಷ್ಟೇ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಅವರು, ಸಮವಸ್ತ್ರದಲ್ಲಿರುವ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ.