ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳಿಗೆ (PG) ಬ್ರೇಕ್ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ನಗರದಲ್ಲಿರುವ ಒಟ್ಟು 5,480 ಪಿಜಿಗಳ ಪೈಕಿ 3,597 ಪಿಜಿಗಳು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿ ಹೊರಬಿದ್ದಿದೆ. ಹೀಗಾಗಿ, ಅನಧಿಕೃತ ಪಿಜಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.