ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ನವೆಂಬರ್ 1 ರಿಂದ ಇಡೀ ತಿಂಗಳು ಪೂರ್ತಿ ಕನ್ನಡ ಚಿತ್ರಗಳು ಮಾತ್ರ ಪ್ರದರ್ಶನ ಮಾಡಬೇಕು ಅಂತ ಕರವೇ ಪ್ರವೀಣ್ ಶೆಟ್ಟಿ ಆಗ್ರಹಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರ ಪ್ರದರ್ಶಿಸದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ನವೆಂಬರ್ 1ರಿಂದ ಒಂದು ತಿಂಗಳು ಪರಭಾಷಾ ಚಿತ್ರಗಳಿಗೆ ಬ್ರೇಕ್ ಹಾಕಬೇಕು.