ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ರಾಜಾನುಕುಂಟೆಯಲ್ಲಿ (Fire Accident) ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ಬೆಂಕಿ ತಗುಲಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು 10:30ರ ವೇಳೆಗೆ ಯಾರ್ಡ್‌ನಲ್ಲಿ ನಿಲ್ಲಿಸಿದ್ದ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.