ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ 400 ಟಿ20 ಅಂತಾರಾಷ್ಟ್ರೀಯ ಸಿಕ್ಸರ್‌ಗಳನ್ನು ಸಿಡಿಸಿದ ವಿಶ್ವದ ಮೊದಲ ತಂಡವಾಗಿ ಟೀಂ ಇಂಡಿಯಾ ಹೊರಹೊಮ್ಮಿದೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.