ಭಾರತ ವಿರುದ್ಧದ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ನ್ಯೂಜಿಲೆಂಡ್ ತಂಡ ಪ್ರಕಟವಾಗಿದೆ. ದೇಶೀಯ ಕ್ರಿಕೆಟ್‌ನಲ್ಲಿ 5 ಎಸೆತಗಳಲ್ಲಿ 5 ವಿಕೆಟ್ ಪಡೆದು ವಿಶ್ವದಾಖಲೆ ನಿರ್ಮಿಸಿದ್ದ ಬ್ರೆಟ್ ರಾಂಡೆಲ್‌ಗೆ ಮೊದಲ ಬಾರಿಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡಲಾಗಿದೆ. ಜೊತೆಗೆ ಜೋಶ್ ಕ್ಲಾರ್ಕ್‌ಸನ್ ಕೂಡ ತಂಡ ಸೇರಿದ್ದಾರೆ.