ದಕ್ಷಿಣ ಜೋರ್ಡಾನ್‌ನ ಕರಕ್ ಪ್ರಾಂತ್ಯದ ಗ್ರೀಕ್ ಆರ್ಥೊಡಾಕ್ಸ್ ಚರ್ಚ್‌ನಲ್ಲಿ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದೂಕುಧಾರಿಗಳು ನಡೆಸಿದ ಭೀಕರ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ರಾಜಧಾನಿ ಅಮ್ಮನ್‌ನಿಂದ 180 ಕಿ.ಮೀ. ದೂರದಲ್ಲಿರುವ ಕ್ರಿಶ್ಚಿಯನ್ ಬಹುಸಂಖ್ಯಾತ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದೆ.