ನವದೆಹಲಿ: ಸಾರ್ವಜನಿಕ ಸಾರಿಗೆಗಳಲ್ಲಿ, ಅದರಲ್ಲೂ ರೈಲು ಪ್ರಯಾಣದ ವೇಳೆ ಮಹಿಳೆಯರು ಹಾಗೂ ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ ಆಗಾಗ ಸುದ್ದಿಗಳು ಕೇಳಿಬರುತ್ತಲೇ ಇರುತ್ತವೆ. ಇದೀಗ ಇಂತಹದ್ದೇ ಒಂದು ಘಟನೆ ಭುವನೇಶ್ವರ-ನವದೆಹಲಿ ನಡುವೆ ಸಂಚರಿಸುವ ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ.