ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಗೆದ್ದ ಬಿಜೆಪಿ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. ಇಂದು (ಶುಕ್ರವಾರ) ಮತ ಎಣಿಕೆ ಮುಕ್ತಾಯಗೊಂಡ ನಂತರ ಫಲಿತಾಂಶಗಳನ್ನು ಪ್ರಕಟಿಸಲಾಯಿತು.