ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲ್ಲೂಕು ಘಟಕದ ವತಿಯಿಂದ ಒಂದೇ ದಿನ 10 ಗ್ರಂಥಾಲಯ ಅನುಷ್ಠಾನಕ್ಕೆ ಉಡುಪಿಯ ಉದ್ಯಮಿಗಳಾದ ಪ್ರೀತಿ ನಾಯಕ್ ಮತ್ತು ಜನಾರ್ದನ್ ನಾಯಕ್ ದಂಪತಿ ಮನೆಯಲ್ಲಿ ಈಚೆಗೆ ಚಾಲನೆ ನೀಡಲಾಯಿತು.