ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ಮಳೆ ಅಡ್ಡಿಯಾಗುತ್ತಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ನಾಲ್ಕನೇ ಪಂದ್ಯದಲ್ಲಿ ಹವಾಮಾನ ಅನುಕೂಲಕರವಾಗಿರುವ ನಿರೀಕ್ಷೆಯಿದ್ದು, ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಭಾರತವಿದೆ. ಆದರೆ, ನಾಯಕತ್ವ ಬದಲಾವಣೆ ಪಂದ್ಯದ ಕುತೂಹಲ ಹೆಚ್ಚಿಸಿದೆ.