ರಾಯಚೂರು: ಸಮಾಜದಲ್ಲಿ ಜಾತಿ ತಾರತಮ್ಯ, ಅಸಮಾನತೆ ಹಾಗೂ ದೌರ್ಜನ್ಯಗಳನ್ನು ತಡೆದು ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸ್ಥಾಪಿಸಲು ಎಲ್ಲ ಸಮುದಾಯದವರು ಒಗ್ಗಟ್ಟಿನಿಂದ ಕೈಜೋಡಿಸಬೇಕು. ಸಮುದಾಯದ ಮುಖಂಡರು ಪರಸ್ಪರ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಯುವಕರಿಗೆ ಉತ್ತಮ ಮಾರ್ಗದರ್ಶನ ನೀಡಬೇಕು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿ. ಹರಿಶೇಖರನ್ ಹೇಳಿದರು.