ವಿಶ್ವ ಕ್ರಿಕೆಟ್‌ನ ದೈತ್ಯ ತಂಡಗಳಿಗೇ ಭಾರತದ ಸ್ಪಿನ್ ಮತ್ತು ವೇಗದ ಬೌಲಿಂಗ್ ದಾಳಿಯನ್ನು ಅವರದೇ ನೆಲದಲ್ಲಿ ಎದುರಿಸುವುದು ಅತ್ಯಂತ ಕಠಿಣ ಸವಾಲು. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಭಾರತದ ಪಿಚ್‌ಗಳಲ್ಲೇ ಭಾರತೀಯ ಬೌಲರ್​ಗಳನ್ನು ದಂಡಿಸಿ, ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಮಾಡದ ಅಪರೂಪದ ಮಹಾ ದಾಖಲೆಯೊಂದನ್ನು ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಬರೆದಿದ್ದಾರೆ.