ವಿವಾದಾತ್ಮಕ ಉರ್ದು ಹಬ್ಬ ಆಚರಣೆಯಿಂದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಹಿಂದೆ ಸರಿದಿದೆ. ಕನ್ನಡಿಗರ ಒತ್ತಾಯಕ್ಕೆ ಮಣಿದು ಉರ್ದು ಹಬ್ಬ ಆಚರಣೆಯನ್ನು ಸರ್ಕಾರ ಕೈ ಬಿಟ್ಟಿದೆ. ಇದೇ ಸಂದರ್ಭದಲ್ಲಿ ನಮಗೆ ಉರ್ದು ಭಾಷೆ ಅಥವಾ ಉರ್ದು ಮಾತನಾಡುವ ಜನರ ವಿರುದ್ಧ ಯಾವುದೇ ವಿರೋಧವಿಲ್ಲ ಎಂದೂ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಹೇಳಿದ್ದಾರೆ.