ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ಅವಧಿಯು ಭಾರತ-ಪಾಕ್ ನಡುವಿನ ತೀವ್ರ ರಾಜಕೀಯ ಜಿದ್ದಾಜಿದ್ದಿನಿಂದಾಗಿ ಭಾರಿ ವಿವಾದಕ್ಕೀಡಾಗಿದೆ. ನಖ್ವಿ ಅವರ ಭಾರತ ವಿರೋಧಿ ನಿಲುವು ಹಾಗೂ ಪ್ರಚೋದನಾತ್ಮಕ ಪೋಸ್ಟ್‌ಗಳ ಹಿನ್ನೆಲೆಯಲ್ಲಿ, ಟೀಮ್ ಇಂಡಿಯಾ ಅವರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.