ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಸ್ಪರ್ಧಿಗಳಾಗಿ ಗುರುತಿಸಿಕೊಂಡಿದ್ದ ಐಶ್ವರ್ಯಾ ಶಿಂದೋಗಿ ಮತ್ತು ಶಿಶಿರ್ ಶಾಸ್ತ್ರಿ, ಅಲ್ಲಿನ ಒಡನಾಟದ ಮೂಲಕ ವೀಕ್ಷಕರ ಗಮನ ಸೆಳೆದಿದ್ದರು. ಬಿಗ್ ಬಾಸ್ ಮನೆಯಲ್ಲಿನ ಪರಿಚಯದ ನಂತರವೂ ಇವರಿಬ್ಬರ ವಿಚಾರವಾಗಿ ಅಭಿಮಾನಿಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು.