ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ವರ್ಗವಾರು ಮೀಸಲಾತಿ ಅಧಿಸೂಚನೆಯನ್ನು ರಾಜ್ಯ ಪಂಚಾಯತ್‌ ರಾಜ್‌ ಇಲಾಖೆ ಪ್ರಕಟಿಸಿದೆ. 31 ಜಿಲ್ಲೆಗಳಿಗೆ ಎಸ್‌ಸಿ, ಎಸ್‌ಟಿ, ಓಬಿಸಿ ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿದ ಸ್ಥಾನಗಳ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಿದೆ. ರಾಜ್ಯದಲ್ಲಿ ಒಟ್ಟು 1,129 ಜಿಲ್ಲಾ ಪಂಚಾಯತ್ ಸ್ಥಾನಗಳಿವೆ.