ನವದೆಹಲಿ: ದೀಪಾವಳಿ(Deepavali) ನಂತರ ಯುಪಿಐ ಶುಲ್ಕ ಜಾರಿ ಮಾಡಲಾಗುವುದು ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ತಿಳಿಸಿದೆ. ಯುಪಿಐ (UPI) ವಹಿವಾಟುಗಳ ಮೇಲಿನ ಶುಲ್ಕ ವಿಧಿಸುವ ಪ್ರಕ್ರಿಯೆಯನ್ನು ಮುಂದೂಡುವಂತೆ ವ್ಯಾಪಾರಿಗಳು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿರುವ ಎನ್‌ಪಿಸಿಐ ನವೆಂಬರ್ ಎರಡನೇ ವಾರದಲ್ಲಿ ಜಾರಿಯಾಗಲಿದೆ ಎಂದು ಹೇಳಿದೆ.