– ಅ.18 ರಿಂದ 25 ರವರೆಗೆ ಆಯೋಜನೆ ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್ (KRS) ಅಣೆಕಟ್ಟಿನ ಬಳಿ ಆಯೋಜಿಸಲು ಉದ್ದೇಶಿಸಲಾಗಿದ್ದ ಕಾವೇರಿ ಆರತಿ (Cauvery Aarti) ಕಾರ್ಯಕ್ರಮದ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯ ಪ್ರಕಾರ ಅ.11 ರಿಂದ ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆರಂಭವಾಗಬೇಕಿತ್ತು.