ರಾಜ್ಯದಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಒಬ್ಬರು ಮೃತಪಟ್ಟಿದ್ದು, ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮುಂದಿನ ಕೆಲವು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.