ಖ್ಯಾತ ಟ್ಯಾಟೂ ಆರ್ಟಿಸ್ಟ್ ಘೋಸ್ಟ್ ಅರ್ಜುನ್ ವಿರುದ್ಧ ಮಹಿಳೆಯೊಬ್ಬರು ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ 9 ಲಕ್ಷ ರೂ. ಸುಲಿಗೆ ಮಾಡಿರುವ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ವಂಚಿಸಿದಲ್ಲದೆ, ಹಣ ನೀಡದಿದ್ದಾಗ ಹಲ್ಲೆ ನಡೆಸಿದ್ದಾನೆ ಎಂದು ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.