ಪ್ರತಿದಿನ ಹಸಿ ಟೊಮೇಟೊ ತಿನ್ನುವುದರಿಂದ ದೇಹಕ್ಕೆ ವಿಟಮಿನ್ ಸಿ, ಫೈಬರ್, ಪೊಟ್ಯಾಸಿಯಂ ಮತ್ತು ಲೈಕೋಪೀನ್ ಸೇರಿದಂತೆ ಹಲವು ಪೋಷಕಾಂಶಗಳು ಸಿಗುತ್ತವೆ. ಇವು ಜೀರ್ಣಕ್ರಿಯೆ, ಹೃದಯದ ಆರೋಗ್ಯ, ರೋಗನಿರೋಧಕ ವ್ಯವಸ್ಥೆ, ಚರ್ಮ ಮತ್ತು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.