ಕನ್ನಡ ಚಿತ್ರರಂಗದ ವರನಟ ಡಾ. ರಾಜ್‌ಕುಮಾರ್ ಅವರಿಗೆ ಅಭಿಮಾನಿಗಳೆಂದರೆ ಎಲ್ಲಿಲ್ಲದ ಪ್ರೀತಿ. ತಮ್ಮ ಅಭಿನಯ ಮತ್ತು ಗಾಯನದ ಮೂಲಕ ಕೋಟ್ಯಂತರ ಜನರ ಮನಗೆದ್ದಿದ್ದ ಅಣ್ಣಾವ್ರು, ಅಭಿಮಾನಿಗಳ ಪ್ರೀತಿಗೂ ಅಷ್ಟೇ ಗೌರವ ನೀಡುತ್ತಿದ್ದರು.