ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳು, ಅವರ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸೋಮವಾರ ಪ್ರಮುಖ ಸಭೆ ನಡೆಸಿ ರೈತರ ಬೇಡಿಕೆಗಳ ಈಡೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನೀರ್ಣಯ ಕೈಗೊಂಡಿದೆ. ಕಬ್ಬು ಬೆಳೆಗಾರರ ​​ಹಿತರಕ್ಷಣೆಗಾಗಿ ಮುಂದಿನ ಒಂದು ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.