ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ಸಂಸದರು ಮುಂದಾಗಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಗ್ರಹಿಸಿದ್ದಾರೆ. ಕಬ್ಬು ಬೆಳೆಗಾರರ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಅವರು, ರೈತರು ಹೋರಾಟ ಮಾಡಲಿ, ಆದರೆ ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.